ಬೆಂಗಳೂರು : ಇಂದಿನಿಂದ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ‘ಬೆಲೆ ಏರಿಕೆ’ ಆರಂಭವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವರು ಬೆಲೆ ಏರಿಕೆಯಿಂದ ಜನರ ಮೇಲೆ 75,000 ಕೋಟಿ ರೂ. ಬರೆ ಬೀಳುತ್ತಿದೆ, ಇವತ್ತಿಂದ 6ನೇ ಗ್ಯಾರಂಟಿ ಬೆಲೆ ಏರಿಕೆ ಆರಂಭವಾಗಿದೆ. ಉಚಿತ ಪ್ರಯಾಣದ ಟಿಕೆಟ್ ಗೆ ಎಸ್ಸಿ, ಎಸ್ಟಿ ಹಣ ಬಳಕೆ ಆಗುತ್ತಿದೆ, ಇದನ್ನು ನಿಲ್ಲಿಸಬೇಕು . ಇಂದಿನಿಂದ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ‘ಬೆಲೆ ಏರಿಕೆ’ ಆರಂಭವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.