ಬೆಂಗಳೂರು: ರಾಜ್ಯ ಸರ್ಕಾರದಿಂದ ಏರ್ ಲೈನ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರದಿಂದಲೇ ಏರ್ ಲೈನ್ಸ್ ಆರಂಭಿಸುವ ಕುರಿತು ಗಂಭೀರ ಚಿಂತನೆ ನಡೆದಿದೆ. ಏರ್ ಇಂಡಿಯಾ ಉನ್ನತ ಅಧಿಕಾರಿಯೊಬ್ಬರ ಜತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಒಂದು ವಿಮಾನಕ್ಕೆ ಸುಮಾರು 200 ಕೋಟಿ ರೂ. ವೆಚ್ಚವಾಗಲಿದ್ದು, ರಾಜ್ಯದಲ್ಲಿ ಸಂಚರಿಸುವ ವಿಮಾನ ಸೇವೆ ಆರಂಭಿಸುವ ಕುರಿತು ಸಲಹೆ ನೀಡಿದ್ದಾರೆ. ಈ ಬಗ್ಗೆ ಪ್ರಾಥಮಿಕ ಹಂತದ ಚರ್ಚೆ ನಡೆದಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ವಿಜಯಪುರ, ಕಾರವಾರ, ಬೀದರ್ ಸೇರಿ ಎಲ್ಲಾ ವಿಮಾನ ನಿಲ್ದಾಣಗಳನ್ನು ಸರ್ಕಾರದಿಂದಲೇ ನಿರ್ವಹಣೆ ಮಾಡಲಾಗುವುದು. ವಿಮಾನ ನಿಲ್ದಾಣ ನಿರ್ವಹಣೆ, ಪ್ರತ್ಯೇಕ ಏರ್ ಲೈನ್ಸ್ ಬಗ್ಗೆ ರಾಜ್ಯ ವಿಮಾನ ಪ್ರಾಧಿಕಾರ ರಚನೆ ಮಾಡುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.