alex Certify BREAKING NEWS: ಬಿಜೆಪಿ ಪ್ರತಿಭಟನೆಗೆ ಕರೆ ನೀಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ: ವಂಟಮೂರಿ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿ ಪ್ರತಿಭಟನೆಗೆ ಕರೆ ನೀಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ: ವಂಟಮೂರಿ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಪ್ರೀತಿಸಿ ಮದುವೆಯಾಗಿದ್ದ ಯುವಕನ ತಾಯಿಯ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ್ದ ಯುವತಿಯ ಕುಟುಂಬದವರು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದರು. ದೇಶಾದ್ಯಂತ ಈ ಪ್ರಕರಣ ಸುದ್ದಿಯಾಗಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿತ್ತು.

ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಸಂತ್ರಸ್ತ ಮಹಿಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...