
ಬೆಳಗಾವಿ: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿಗೆ ಬಂದಾಗಿನಿಂದ ಬಸ್ ಗಳಲ್ಲಿ ಮಹಿಳಾಮಣಿಗಳದ್ದೇ ದರ್ಬಾರ್. ಸರ್ಕಾರ ಉಚಿತ ಪ್ರಯಾಣವನ್ನು ಘೋಷಿಸಿದರೂ ಮಹಿಳೆಯರು ಸೀಟಿಗಾಗಿ ಹೊಡೆದಾಡಿಕೊಳ್ಳುತ್ತಿದ್ದಾರೆ.
ಬಸ್ ನಲ್ಲಿ ಮಹಿಳೆಯರಿಬ್ಬರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ- ಬೆಳಗಾವಿ ಮಾರ್ಗದ ಬಸ್ ನಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಜಗಳವಾಡಿ ಹೊಡೆದಾಡಿಕೊಂಡಿದ್ದಾರೆ.
ಓರ್ವ ಮಹಿಳೆ ಮತ್ತೋರ್ವ ಮಹಿಳೆಗೆ ಚಪ್ಪಲಿಯಲ್ಲಿ ಹೊಡೆದಿದ್ದಾಳೆ. ಮಹಿಳೆ ಚಪ್ಪಲಿಯಲ್ಲಿ ಹೊಡೆಯುತ್ತಿದ್ದಂತೆ ಪುರುಷ ಪ್ರಯಾಣಿಕ ಮಹಿಳೆಯನ್ನು ಥಳಿಸಿದ್ದಾನೆ. ಮಹಿಳೆಯರಿಬ್ಬರೂ ಹೆಡೆದಾಡಿಕೊಂಡಿದ್ದಲ್ಲದೇ ಇಬ್ಬರೂ ಕಿರುಚಾಡಿ ಕಣ್ಣೀರಿಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಉಳಿದ ಪ್ರಯಾಣಿಕರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರ ಹೊಡೆದಾಟದ ವಿಡಿಯೋ ವೈರಲ್ ಆಗಿದೆ.