ನವದೆಹಲಿ : ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಕೇಂದ್ರವು ಮಂಗಳವಾರ ಸಂಸತ್ತಿನಲ್ಲಿ ವಿವಿಧ ಪಕ್ಷಗಳ ಸದನ ನಾಯಕರ ಸಭೆಯನ್ನು ಕರೆದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಅಧಿವೇಶನ ಪ್ರಾರಂಭವಾಗಲಿದೆ. ಈ ಬಾರಿ ಜನವರಿ 31 ರಿಂದ ಫೆಬ್ರವರಿ 9 ರವರೆಗೆ ಸಣ್ಣ ಅಧಿವೇಶನ ನಡೆಯಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.
ಪ್ರತಿಪಕ್ಷಗಳು ಕೂಡ ಕಲಾಪಕ್ಕೆ ಸಜ್ಜಾಗಿದ್ದು ಬಜೆಟ್ ಸೇರಿದಂತೆ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಅಧಿವೇಶನದಲ್ಲಿ ಚರ್ಚಿಸುವ ನಿರೀಕ್ಷೆಯಿದೆ. ಜೊತೆಗೆ ಈಗಾಗಲೇ ಯೋಜಿಸಿಕೊಂಡಿರುವ ಅನೇಕ ವಿಚಾರಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ಕಾರ್ಯತಂತ್ರ ರೂಪಿಸಿವೆ.