
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ, ಸಿಇಟಿ ತರಬೇತಿ ನೀಡಲಾಗುವುದು.
ಅಂದಾಜು 25,000 ವಿದ್ಯಾರ್ಥಿಗಳಿಗೆ 12.50 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತವಾಗಿ ನೀಟ್, ಸಿಇಟಿ, ಜೆಇಇ ತರಬೇತಿ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಸುಮಾರು 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ತರಬೇತಿ ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿದೆ.