ನವದೆಹಲಿ: ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್ ನೀಡಲಾಗಿದೆ. ಶೇಕಡ 3 ರಷ್ಟು ಡಿಎ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ಡಿಎ ಹೆಚ್ಚಳ ಮಾಡಲಾಗಿದೆ. ಡಿಎ ಶೇಕಡ 28 ರಿಂದ ಶೇಕಡ 31 ಕ್ಕೆ ಏರಿಕೆಯಾಗಲಿದ್ದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 9488.70 ಕೋಟಿ ರೂಪಾಯಿ ಹೊರೆಯಾಗಲಿದೆ.