ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ ರದ್ದುಪಡಿಸುವಂತೆ ಹೊರಡಿಸಿದ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ.
ಸೊರಬದಲ್ಲಿ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಈ ಬಗ್ಗೆ ಒತ್ತಾಯಿಸಿದ್ದಾರೆ.
ದಿನದ 10 ಗಂಟೆ ನಾವು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ಗೌರವ ಧನವಾಗಿ ದಿನಕ್ಕೆ 500 ರೂಪಾಯಿ ನೀಡುತ್ತಿದೆ. ವರ್ಷಕ್ಕೆ 1.20 ಲಕ್ಷ ರೂಪಾಯಿ ಆದಾಯ ಮೀರಲಿದೆ ಎನ್ನುವ ಕಾರಣಕ್ಕೆ ಪಡಿತರ ಚೀಟಿ ರದ್ದು ಮಾಡಲು ಸರ್ಕಾರ ಆದೇಶ ಹೊರಡಿಸಿರುವುದು ಬಡ ನೌಕರರ ಕುಟುಂಬದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದ್ದಾರೆ.
ದಿನದ ಖರ್ಚು ವೆಚ್ಚಕ್ಕೆ ನೀಡುವ ವೇತನ ಸಾಕಾಗುತ್ತೆ ಹೊರಡಿಸಿದ ಆದೇಶವನ್ನು ಹಿಂಪಡೆಯಬೇಕು. ಬಾಕಿ ಉಳಿಸಿಕೊಂಡಿರುವ ವೇತನವನ್ನು ಸಕಾಲಕ್ಕೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.