
ಬೆಂಗಳೂರು: ಶಿರಾ ಉಪ ಚುನಾವಣೆ ಹೊತ್ತಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಘೋಷಿಸಿದ್ದು ಬಿಜೆಪಿ ಗೆಲುವಿಗೆ ಸಹಕಾರಿಯಾಯ್ತು ಎನ್ನುವ ಮಾತು ಕೇಳಿಬಂದಿರುವ ಹೊತ್ತಲ್ಲೇ ಮತ್ತೊಂದು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಮುಂದಾಗಿದೆ.
ಮತ್ತೊಂದು ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದು, ಪ್ರಾಧಿಕಾರಕ್ಕೆ 50 ಕೋಟಿ ರೂಪಾಯಿ ಮೀಸಲಿಡಲು ಸೂಚನೆ ನೀಡಿದ್ದಾರೆ. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ಆದೇಶ ನೀಡಲಾಗಿದೆ ಎಂದು ಹೇಳಲಾಗಿದೆ.
ಮರಾಠ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಪ್ರಾಧಿಕಾರ ರಚನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಬಸವಕಲ್ಯಾಣ ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಲಾಗಿದ್ದು, ಚರ್ಚೆ ಬಳಿಕ ಪ್ರಾಧಿಕಾರ ರಚನೆಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.