ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಮಣಿದಿರುವ ಸರ್ಕಾರ ಇತ್ತೀಚೆಗೆ ರದ್ದು ಮಾಡಲಾಗಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೆ ತರಲು ಒಪ್ಪಿದೆ.
ಸ್ಥಗಿತಗೊಳಿಸಲಾಗಿದ್ದ ತುಟ್ಟಿಭತ್ಯೆಯನ್ನು ಮತ್ತೆ ನೀಡಬೇಕು. ನಿವೃತ್ತಿ ಹೊಂದಿದ ಅಧಿಕಾರಿಗಳು ಮತ್ತು ನೌಕರರ ನೇಮಕವನ್ನು ರದ್ದು ಮಾಡಬೇಕು. ಹೊರಗುತ್ತಿಗೆ ನಿಲ್ಲಿಸಬೇಕು ಹಾಗೂ ನೌಕರ ವಿರೋಧಿ ನಿಯಮಗಳನ್ನು ಹಿಂದೆ ಪಡೆದುಕೊಳ್ಳಬೇಕೆಂದು ಸರ್ಕಾರಿ ನೌಕರರ ಸಂಘಟನೆಗಳು ಪ್ರತಿಭಟನೆ ನಡೆಸಿ ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದ್ದು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಭರವಸೆ ನೀಡಿದ್ದಾರೆ. ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.