
ಬೆಳಗಾವಿ: ಕೇಂದ್ರ ಸರ್ಕಾರದ ನೌಕರರ ವೇತನ ಪರಿಷ್ಕರಿಸಲಿದ್ದು, ಅದೇ ಮಾದರಿಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ನೀಡುವ ನಿಟ್ಟಿನಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಜಿಲ್ಲಾ ಘಟಕದಿಂದ ಶನಿವಾರ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಅವರ ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾಗ ಯಾರೂ ಒಪ್ಪಲಿಲ್ಲ. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿಗಳ ಒತ್ತಡದಲ್ಲಿಯೂ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿ ಸರ್ಕಾರಿ ನೌಕರರ 7ನೇ ವೇತನ ಆಯೋಗ ಜಾರಿ ಮಾಡಿದ್ದಾರೆ ಎಂದು ಹೇಳಿದ್ದಾರೆ.