alex Certify ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ ಬಗ್ಗೆ ಸಿಎಂ ಭರವಸೆ: ಸಮ್ಮೇಳನಕ್ಕೆ ಬಸ್ ವ್ಯವಸ್ಥೆ, ರಜೆ ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ ಬಗ್ಗೆ ಸಿಎಂ ಭರವಸೆ: ಸಮ್ಮೇಳನಕ್ಕೆ ಬಸ್ ವ್ಯವಸ್ಥೆ, ರಜೆ ಮಂಜೂರು

ಬೆಂಗಳೂರು: ಸರ್ಕಾರಿ ನೌಕರರ ವೇತನ ಹೆಚ್ಚಳ ಆಗಲಿದೆ. ಹೋರಾಟ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ. ಹಾಗೊಂದು ವೇಳೆ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ಅನಿವಾರ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

ಫೆ. 27ರಂದು ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿದ್ದು, ಈ ಸಮ್ಮೇಳನದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೌಕರರನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಡಾ.ಸಿ.ಎನ್. ಮಂಜುನಾಥ್ ನೌಕರರ ಒತ್ತಡದ ಬಗ್ಗೆ ಉಪನ್ಯಾಸ ನೀಡಲಿದ್ದು, ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಆಡಳಿತ ಅಭಿವೃದ್ಧಿ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಸರ್ಕಾರದ ಎಲ್ಲಾ ಸಚಿವರು ಇರಲಿದ್ದಾರೆ. ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಆರಂಭವಾಗಿ ಮಧ್ಯಾಹ್ನ 3 ಗಂಟೆವರೆಗೆ ಇರಲಿದೆ. ಸಮ್ಮೇಳನಕ್ಕೆ ಬರುವ ನೌಕರರಿಂದ ಯಾವುದೇ ಶುಲ್ಕ ಪಡೆಯುತ್ತಿಲ್ಲ. ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಿಂದ ಬರುವ ನೌಕರರಿಗೆ ಬಸ್ ವ್ಯವಸ್ಥೆ ಸಹ ಮಾಡಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ. ಕಳೆದ 7 ವರ್ಷಗಳಿಂದ ಸಮ್ಮೇಳನ ನಡೆಸಿರಲಿಲ್ಲ. ಈ ವರ್ಷ ಸಂಘಟನಾತ್ಮಕವಾಗಿ ಶಕ್ತಿ ತೋರಿಸಲು ಸಮ್ಮೇಳನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...