ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೀಪಾವಳಿಗೆ ಮೊದಲೇ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರು, ನಿವೃತ್ತ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 3.75 ರಷ್ಟು ಹೆಚ್ಚಳ ಮಾಡಲಾಗಿದೆ. ಜುಲೈ 1 ರಿಂದಲೇ ಪೂರ್ವಾನ್ವಯವಾಗುವಂತೆ ಸಿಎಂ ಬಸವರಾಜ ಬೊಮ್ಮಾಯಿ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ. ಇದರಿಂದ ಸರ್ಕಾರಕ್ಕೆ 1,282.72 ಕೋಟಿ ರೂ. ಹೊರೆಯಾಗಲಿದೆ ಎಂದು ಹೇಳಲಾಗಿದೆ.