ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಬಂಪರ್ ಕೊಡುಗೆ ನೀಡಲಾಗುವುದು. ಡಿಎ ಶೇ. 3 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಶೇಕಡ 3ರಷ್ಟು ಹೆಚ್ಚಳ ಮಾಡುವ ಸಾಧ್ಯತೆಯಿದ್ದು, ಶೇ.3 ರ ಹೆಚ್ಚಳದ ನಂತರ ತುಟ್ಟಿಭತ್ಯೆ ಮೂಲವೇತನದ ಶೇಕಡ 45ಕ್ಕೆ ತಲುಪಲಿದೆ. ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಹೆಚ್ಚಳದ ಸೌಲಭ್ಯ ಸಿಗಲಿದೆ. ಗ್ರಾಹಕ ಬೆಲೆ ಸೂಚ್ಯಂಕ ಆಧಾರದ ಮೇಲೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗುತ್ತದೆ.