
ಬೆಂಗಳೂರು: 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಗಸ್ಟ್ 17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ‘ನಮ್ಮಭಿಮಾನದ ಅಭಿನಂದನೆ’ ಹೆಸರಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಸಿಎಂ, ಡಿಸಿಎಂ ಅವರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನೌಕರರಿಗೆ ಸರ್ಕಾರದಿಂದ ಆಗಸ್ಟ್ 17ರಂದು ಶನಿವಾರ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ.