
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಇನ್ನೂ ಒಂದು ತಿಂಗಳು ವಿಳಂಬವಾಗುವ ಸಾಧ್ಯತೆ ಇದೆ.
ಶೇಕಡ 30 ರಿಂದ 35 ರಷ್ಟು ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರು ಪರಿಷ್ಕೃತ ವೇತನ ಪಡೆದುಕೊಳ್ಳಲು ಇನ್ನು ಮೂರ್ನಾಲ್ಕು ತಿಂಗಳು ಕಾಯುವಂತಾಗಿದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ವೇತನ ಆಯೋಗ ವರದಿ ಸಿದ್ದಪಡಿಸುತ್ತಿದ್ದು, ವರದಿ ಸಲ್ಲಿಕೆಗೆ ನೀಡಲಾಗಿದ್ದ ಕಾಲಾವಕಾಶ ಈ ತಿಂಗಳ 19ಕ್ಕೆ ಮುಕ್ತಾಯವಾಗಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಆಯೋಗದ ಕಾರ್ಯ ಚಟುವಟಿಕೆ ವಿಳಂಬವಾಗಿದ್ದು, ಒಂದು ತಿಂಗಳು ಹೆಚ್ಚುವರಿ ಕಾಲಾವಕಾಶ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮೂಲವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಏಪ್ರಿಲ್ ವೇತನದಲ್ಲೇ ಸರ್ಕಾರಿ ನೌಕರರ ಕೈ ಸೇರಿದೆ. ಆಯೋಗದ ಅಂತಿಮ ವರದಿ ಆಧರಿಸಿ ಒಟ್ಟರೆ ಶೇಕಡ 30 ರಿಂದ 35ರಷ್ಟು ವೇತನ ಹಾಗೂ ಭತ್ಯೆ ಹೆಚ್ಚಳವಾಗಲಿದೆ. ಸರ್ಕಾರಿ ನೌಕರರಿಗೆ ಶೀಘ್ರವೇ ಡಿಎ ಹೆಚ್ಚಳ ಮಾಡಲಾಗುವುದು ಎಂದು ಹೇಳಲಾಗಿದೆ.