alex Certify 7ನೇ ವೇತನ ಆಯೋಗ ವರದಿ ಸೇರಿ ಸರ್ಕಾರಿ ನೌಕರರ ಪರ 25 ಆದೇಶ ಜಾರಿ: 17 ರಂದು ಸಿಎಂಗೆ ಸನ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

7ನೇ ವೇತನ ಆಯೋಗ ವರದಿ ಸೇರಿ ಸರ್ಕಾರಿ ನೌಕರರ ಪರ 25 ಆದೇಶ ಜಾರಿ: 17 ರಂದು ಸಿಎಂಗೆ ಸನ್ಮಾನ

ಚಿತ್ರದುರ್ಗ: ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಸಂಘದಿಂದ ಗುರುತಿಸಿ, ಗೌರವಿಸುವಂತಹ ಕಾರ್ಯವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಮಾಡುತ್ತಿದ್ದು, ನೌಕರರ ಮಕ್ಕಳು ಕೂಡ ಅವಕಾಶಗಳನ್ನು ಬಳಸಿಕೊಂಡು ಸತ್ಪ್ರಜೆಗಳಾಗಿ ನಾಡಿಗೆ ಕೀರ್ತಿ ತರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸರ್ವ ಸದಸ್ಯರ ಸಭೆ, ನೌಕರರಿಗೆ ನಾಯಕತ್ವ ಗುಣಗಳು ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಗಾರ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘಟನೆಗೆ 104 ವರ್ಷಗಳ ಇತಿಹಾಸವಿದೆ. ರಾಜ್ಯದ ಸಂಘಟನೆಗಳ ಪೈಕಿ ಹೆಚ್ಚು ಪರಿಣಾಮಕಾರಿಯಾದ ಸಂಘಟನೆಯಾಗಿದೆ. ಇದು ಯಾವುದೇ ಪಕ್ಷಕ್ಕೆ, ಧರ್ಮಕ್ಕೆ, ಜಾತಿಗೆ ಅಂಟಿಕೊಳ್ಳದೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯ ಮಾಡಲಾಗುತ್ತಿದೆ. ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸಂಘಟನೆಯ ಮೂಲಕ ನೌಕರರ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲು ಸಾಧ್ಯವಿಲ್ಲವಾದರೂ, ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಅದರಂತೆಯೇ ಸಂಘದ ಮೂಲಕ ಸರ್ಕಾರಕ್ಕೆ ಶಿಫಾರಸ್ಸು ಮಾಡಿ, ಏಳನೇ ವೇತನ ಆಯೋಗ ಜಾರಿಗೆ ತರುವುದರ ಜೊತೆಗೆ ಇಲ್ಲಿಯವರೆಗೆ ಒಟ್ಟು 25 ಸರ್ಕಾರಿ ಆದೇಶಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದೇವೆ.  ಕಳೆದ 5 ವರ್ಷದಲ್ಲಿ ನೌಕರರು ಅತ್ಯಂತ ಸಂತೋಷ, ನೆಮ್ಮದಿಯಿಂದ ಜೀವನ ಸಾಗಿಸುವಂತಹ ವಾತಾವರಣ ನಿರ್ಮಾಣವಾಗಿದೆ ಎಂದರು. ಈ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೇ ಆಗಸ್ಟ್ 17ರಂದು ಸಂಘದ ವತಿಯಿಂದ ಸನ್ಮಾನಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ, ಜಿಲ್ಲಾ ಖಜಾಂಚಿ ವೀರೇಶ್, ವ್ಯಕ್ತಿತ್ವ ವಿಕಸನ ತರಬೇತುದಾರ ಹೊಸದುರ್ಗದ ಹೆಚ್.ಎಸ್. ನವೀನ್ ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿ ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷ ಎಸ್. ಬಸವರಾಜ್, ಕಾರ್ಯದರ್ಶಿ ನೆಲ್ಕುದ್ರಿ ಸದಾನಂದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್. ಮಂಜುನಾಥ್, ಕ್ಷೇತ್ರ ಸಮನ್ವಯಾಧಿಕಾರಿ ಈ. ಸಂಪತ್ ಕುಮಾರ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಅಭಿನವ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...