ಗದಗ: ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಸೇರಿದಂತೆ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 16ರಂದು ರಾಷ್ಟ್ರವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ.
ರಾಜ್ಯ ಸರ್ಕಾರ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಜೈಕುಮಾರ ಹೆಚ್.ಎಸ್. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಫೆಬ್ರವರಿ 16ರಂದು ರಾಜ್ಯ ಸರ್ಕಾರಿ ನೌಕರರು ಸೇವೆಗೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ ಎಲ್ಲಾ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.