ಬೆಂಗಳೂರು: 7 ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಇಂದಿನಿಂದ ಮುಷ್ಕರ ಕೈಗೊಂಡಿದ್ದಾರೆ.
ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸರ್ಕಾರ ಚರ್ಚೆ ನಡೆಸಿದರೂ ಮುಷ್ಕರ ಕೈಬಿಡುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆದೇಶ ಹೊರಡಿಸಿದರೆ ಮಾತ್ರ ಮುಷ್ಕರ ಹಿಂಪಡೆಯುವುದಾಗಿ ನೌಕರರು ಷರತ್ತು ಹಾಕಿದ್ದು, ಇದರಿಂದಾಗಿ ಸರ್ಕಾರಿ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಏನಿರುತ್ತೆ…?
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರಲಿದೆ. ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಪದವಿ, ಸ್ನಾತಕೋತ್ತರ ಪದವಿ ತರಗತಿ, ನೀರು, ವಿದ್ಯುತ್ ಸರಬರಾಜು ಇರಲಿದೆ.
ಏನಿರಲ್ಲ…?
ಗ್ರಾಪಂ, ವಿಧಾನಸೌಧ, ಸಚಿವಾಲಯ, ಬಿಬಿಎಂಪಿ ಕಚೇರಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಸರ್ಕಾರಿ ಶಾಲೆ, ಪಿಯು ಕಾಲೇಜ್, ಸರ್ಕಾರಿ ಆಸ್ಪತ್ರೆಗಳ ಒಪಿಡಿ ವಿಭಾಗ, ಸರ್ಕಾರಿ ವಿದ್ಯಾರ್ಥಿ ನಿಲಯಗಳು ಇರುವುದಿಲ್ಲ.
ಸುಮಾರು 5.3 ಲಕ್ಷ ರಾಜ್ಯ ಸರ್ಕಾರಿ ನೌಕರರು 3 ಲಕ್ಷ ನಿಗಮ ಮಂಡಳಿ ನೌಕರರು ಮುಷ್ಕರದಲ್ಲಿ ಭಾಗವಹಿಸುವುದರಿಂದ ಸೇವೆಯಲ್ಲಿ ವ್ಯತ್ಯಯವಾಗಲಿದೆ.