ನವದೆಹಲಿ: ಜನವರಿ 16 ರಿಂದ ಕೊರೋನಾ ಲಸಿಕೆ ನೀಡಲು ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಲಸಿಕೆ ಪೂರೈಕೆ ಮಾಡಲಾಗುತ್ತಿದ್ದು, ಎರಡು ಲಸಿಕೆಗಳಲ್ಲಿ ಒಂದನ್ನು ಆಯ್ಕೆ ಮಾಡಲು ಯಾವುದೇ ಅವಕಾಶ ಇರುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಯೋಗದ ವಿವಿಧ ಹಂತಗಳಲ್ಲಿರುವ ಇನ್ನೂ ನಾಲ್ಕು ಲಸಿಕೆಗಳು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.
ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿದ ಕೊವಿಶೀಲ್ಡ್ ಮತ್ತು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.
ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರಿಗೆ ನೀಡಲು ಆಯ್ಕೆ ಮಾಡಲಾಗಿದೆ. ಎರಡು ಲಸಿಕೆಗಳಲ್ಲಿ ಆಯ್ಕೆಗೆ ಅವಕಾಶ ಇರುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಇನ್ನು ಭಾರತದಲ್ಲಿ ಸಹಯೋಗದಲ್ಲಿ ಜೈಡಸ್ ಕ್ಯಾಡಿಲಾ, ಸ್ಪುಟ್ನಿಕ್ ವಿ, ಬಯೋಲಾಜಿಕಲ್ –ಇ, ಜೆನ್ನೋವಾ ಲಸಿಕೆಗಳನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಇವುಗಳಿಗೂ ಅನುಮೋದನೆ ಸಿಗಲಿದೆ ಎಂದು ಹೇಳಲಾಗಿದೆ.