ಬೆಂಗಳೂರು: ವನ್ಯಜೀವಿಗಳಿಗೆ ಸಂಬಂಧಿತ ವಸ್ತುಗಳನ್ನು ಹಿಂದಿರುಗಿಸಲು ರಾಜ್ಯ ಸರ್ಕಾರ ಮೂರು ತಿಂಗಳು ಅವಧಿ ವಿಸ್ತರಿಸಿದೆ.
ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಹುಲಿ ಉಗುರು, ಹುಲಿ ಚರ್ಮ, ಜಿಂಕೆ ಕೊಂಬು, ಚರ್ಮ ಹೀಗೆ ವನ್ಯಜೀವಿಗಳಿಗೆ ಸಂಬಂಧಿಸಿದ ಯಾವುದೇ ವಸ್ತು, ಅಂಗಾಗಳನ್ನು ಸಂಗ್ರಹಿಸಿದ್ದರೂ ಅವುಗಳನ್ನು ಹಿಂದಿರುಗಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೂರು ತಿಂಗಳು ಅವಧಿ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಹುಲಿ ಉಗುರು, ಜಿಂಕೆ ಕೊಂಬು, ಆನೆ ದಂತ, ಹುಲಿ ಚರ್ಮಗಳನ್ನು ಅಕ್ರಮವಾಗಿ ಸಂಗ್ರಹಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವುಗಳನ್ನು ಸರ್ಕಾರಕ್ಕೆ ಹಿಂದಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡುವ ನಿಟ್ಟಿನಲ್ಲಿ ಮೂರು ತಿಂಗಳ ಕಾಲ ಅವಧಿ ವಿಸ್ತರಿಸಲಾಗಿದೆ.