ನವದೆಹಲಿ: ದೇಶದ ಮಾರುಕಟ್ಟೆಯಲ್ಲಿ ಈರುಳ್ಳಿ ಲಭ್ಯತೆ, ದರ ಏರಿಳಿತದ ಮೇಲೆ ಸರ್ಕಾರ ಕಣ್ಣಿಟ್ಟಿದ್ದು, ಈರುಳ್ಳಿ ಮೇಲಿನ ರಫ್ತು ನಿಷೇಧ ವಿಸ್ತರಿಸಿದೆ.
ಮಾರ್ಚ್ 31ರವರೆಗೂ ಇದ್ದ ನಿಷೇಧವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ. ವಿದೇಶಿ ವ್ಯಾಪಾರ ನಿರ್ದೇಶನಾಲಯ ಈ ಬಗ್ಗೆ ಅಧಿಸೂಚನೆ ಹೊರಡಿಸಿ, ಮಾರ್ಚ್ 31ರವರೆಗೆ ಇದ್ದ ಈರುಳ್ಳಿ ನಿಷೇಧವನ್ನು ಮುಂದಿನ ಆದೇಶದವರೆಗೂ ವಿಸ್ತರಿಸಿದೆ. 2023ರ ಹಿಂಗಾರು ಹಂಗಾಮಿನಲ್ಲಿ ದೇಶದಲ್ಲಿ 2.27 ಕೋಟಿ ಟನ್ ಈರುಳ್ಳಿ ಉತ್ಪಾದನೆ ನಿರೀಕ್ಷೆ ಇದೆ. ಈರುಳ್ಳಿ ಬೆಲೆ ಏರಿಕೆಯಾಗಿದ್ದ ಹಿನ್ನಲೆಯಲ್ಲಿ ಕಳೆದ ವರ್ಷ ಡಿಸೆಂಬರ್ 8ರಂದು ವಿದೇಶಗಳಿಗೆ ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿತ್ತು.