
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ನೌಕರರಿಗೆ ಮಂಜೂರು ಮಾಡುವ ಹಬ್ಬದ ಮುಂಗಡ ಮೊತ್ತವನ್ನು 10,000 ರೂ.ನಿಂದ 25,000 ರೂ.ಗೆ ಹೆಚ್ಚಳ ಮಾಡಲಾಗಿದೆ.
ಕೇಂದ್ರ ಸರ್ಕಾರ ಮತ್ತು ಇತರೆ ರಾಜ್ಯಗಳಲ್ಲಿಯೂ ಸರ್ಕಾರಿ ನೌಕರರಿಗೆ ಇಡೀ ಮೊತ್ತದ ಹಬ್ಬದ ಮುಂಗಡ ನೀಡಲಾಗುವುದಿಲ್ಲ. ರಾಜ್ಯದಲ್ಲಿ ಕೊಡುವ ಹಬ್ಬದ ಮುಂಗಡ ಅತಿ ಹೆಚ್ಚಿನದಾಗಿದೆ. ಸರ್ಕಾರಿ ನೌಕರರ ಹಬ್ಬದ ಮುಂಗಡವನ್ನು 10 ಸಾವಿರದಿಂದ 25000 ರೂ. ಗೆ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯಂತೆ ಮುಂಗಡ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮತ್ತು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.