ಬೆಂಗಳೂರು: ನಾಳೆ ವಿಧಾನಸೌಧದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಏರ್ಪಡಿಸಲಾಗಿದೆ. ಹೀಗಾಗಿ ನಾಳೆ ವಿಧಾನಸೌಧದ ಸಿಬ್ಬಂದಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಭದ್ರತಾ ದೃಷ್ಟಿಯಿಂದ ನಾಳೆ ವಿಧಾನಸೌಧದ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ರಜೆ ಘೋಷಣೆ ಮಾಡಲಾಗಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುವ ಡಿಪಿಎಆರ್, ಆರ್ಥಿಕ, ಒಳಾಡಳಿತ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಚೇರಿಗಳಿಗೆ ರಜೆ ನೀಡಲಾಗಿದೆ ಎನ್ನಲಾಗಿದೆ.