
ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಮತಿ ದೊರೆತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಅನುಮತಿ ದೊರೆತಿದೆ. ಇದರ ಜೊತೆಗೆ ಪ್ರಸೂತಿ ಮತ್ತು ತಜ್ಞ ವೈದ್ಯರ ವೇತನ ಹೆಚ್ಚಳಕ್ಕೂ ಕ್ರಮ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದೆ. ಹೊಸ ಹೊಸ ಆರೋಗ್ಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಾರ್ವಜನಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳು ತಲುಪುವಂತೆ ವ್ಯವಸ್ಥಿತ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.