ಕೋಲಾರ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ದೂರು ಪುಸ್ತಕ ಇಡಲಾಗುವುದು. ರೋಗಿಗಳಿಂದ ಸಲಹೆ, ಸೂಚನೆ ಪಡೆಯುವ ಕ್ರಮ ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕೋಲಾರದ ಎಸ್.ಎನ್.ಆರ್. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವರು ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ದೂರು ಪುಸ್ತಕ ಇಡಲಾಗುವುದು. ರೋಗಿಗಳಿಂದ ಸಲಹೆ, ಸೂಚನೆ, ಅಭಿಪ್ರಾಯ ಪಡೆಯುವ ಕ್ರಮ ಜಾರಿಗೊಳಿಸಲಾಗುವುದು. ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.