ಬೆಂಗಳೂರು: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಉತ್ತಮ ಆಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ 1,750 ರೂ. ನೀಡಲಾಗುತ್ತಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಾಸಿಕ ಭೋಜನ ವೆಚ್ಚವನ್ನು 1,600 ರೂ.ನಿಂದ 1,750 ರೂ.ಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1,500 ರೂ.ನಿಂದ 1,650 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಇ -ಕಾಮರ್ಸ್ ಗಾಗಿ ವಾಹನ ಖರೀದಿಗೆ ಅನುಕೂಲ ಕಲ್ಪಿಸಲಾಗುತ್ತದೆ. ಆಹಾರ ಮತ್ತು ಇತರ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸಲು ವಾಹನ ಸೌಲಭ್ಯ ಒದಗಿಸಲಾಗುವುದು. ವಿದ್ಯುತ್ ವಾಹನ ಮತ್ತು ದ್ವಿಚಕ್ರ ವಾಹನಗಳಿಗೆ ಗರಿಷ್ಠ 50 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಈ ಸಹಾಯಧನದ ಜೊತೆಗೆ 20,000 ರೂ. ಸಾಲ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100ರಂತೆ 22,400 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
300 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಬೆಂಗಳೂರಿನ ಐಐಎಂನಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.