ನವದೆಹಲಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಪ್ರಯತ್ನ ಮಾಡುವುದಿಲ್ಲ. ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ.
ಬಿಜೆಪಿಯ ದ್ವೇಷದ ರಾಜಕಾರಣ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯ ನಂತರ ಅವರು ಮಾತನಾಡಿ, ಮುಂದಿನ ರಾಜಕೀಯ ತಂತ್ರಗಳ ಕುರಿತಾಗಿ ಸಭೆಯಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ವಾಧಿಕಾರದ ವಿರುದ್ಧ ನಮ್ಮ ಮೈತ್ರಿಕೂಟ ಸಂಘಟಿತ ಹೋರಾಟ ಮುಂದುವರೆಸಲಿದೆ. ಜನರ ಆಕಾಂಕ್ಷೆಗಳನ್ನು ಸರ್ಕಾರ ಕಡೆಗಣಿಸಲು ಎಂದಿಗೂ ಬಿಡುವುದಿಲ್ಲ. ಸಂವಿಧಾನ ಬದಲಿಸುವ ಮನಸ್ಥಿತಿ ಇರುವ, ಜಾತಿ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವ ಕುತಂತ್ರ ನೀತಿಗಳಿಗೆ ಅವಕಾಶ ಕೊಡುವುದಿಲ್ಲ. ಸರಿಯಾದ ನಿರ್ಧಾರವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳುತ್ತೇವೆ. ನಮ್ಮೊಂದಿಗೆ ಕೈಜೋಡಿಸಿ ಎಂದು ಕೇಳಿದ್ದಾರೆ.