ಬೆಂಗಳೂರು : ಬರಗಾಲ ಘೋಷಣೆ ಮಾಡುವುದಕ್ಕೂ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮಳೆಯಾಗಿಲ್ಲ, ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ಈ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವುದಕ್ಕೂ ಮೀನಮೇಷ ಎಣಿಸುತ್ತಿದೆ ಎಂದಿದ್ದಾರೆ.
ಮೈತ್ರಿ ಬಗ್ಗೆ ಮಾತನಾಡಿದ ಹೆಚ್ಡಿಕೆ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸದ್ಯದಲ್ಲೇ ದೆಹಲಿಗೆ ಹೋಗುತ್ತೇವೆ ಎಂದು ಹೇಳಿದರು.ಬೆಳಗ್ಗೆಯಷ್ಟೇ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್ಡಿಕೆ ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರಕಾರ ನೀರು ಹರಿಸಬಾರದು ಎಂದಿದ್ದರು.