alex Certify BIG NEWS: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಕೊರೋನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಮೃತರಾದವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ನಾವು ಭರವಸೆ ನೀಡಿದ್ದೆವು. ಈ ಬಗ್ಗೆ ಏನಾದರೂ ಬೆಳವಣಿಗೆ ಆಗಿದೆಯೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉತ್ತರ ನೀಡಿ, 32 ಮಂದಿಗೆ ಕಾಯಂ ಉದ್ಯೋಗ ಕೊಡುವ ನಿಟ್ಟಿನಲ್ಲಿ ಅವರ ವಿದ್ಯಾರ್ಹತೆ ಪಡೆದುಕೊಂಡಿದ್ದು, ಉದ್ಯೋಗಗಳು ಎಲ್ಲಿ ಖಾಲಿ ಇವೆ ಎಂಬ ಮಾಹಿತಿ ಪಡೆದಿದ್ದೇವೆ. ಪ್ರಸ್ತಾವನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯುವ ಅಗತ್ಯವಿದ್ದು, ಪ್ರಸ್ತಾವನೆ ಕಳುಹಿಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...