ಚಿತ್ರದುರ್ಗ : ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬದವರಿಗೆ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮೃತರ ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ. ಕವಾಡಿಗರಹಟ್ಟಿ ನಿವಾಸಿಗಳಿಗೆ 3 ಎಕರೆ ಜಮೀನಿನಲ್ಲಿ ವಸತಿ ವ್ಯವಸ್ಥೆ ನಿರ್ಮಿಸಲಾಗುವುದು. ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು, ಕವಾಡಿಗರಹಟ್ಟಿ ಬಡಾವಣೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.