ಬೆಳಗಾವಿ(ಸುವರ್ಣಸೌಧ): ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ನಿರ್ಧಾಕ್ಷಿಣ್ಯವಾಗಿ ತೆರವುಗೊಳಿಸಿ ಭೂಮಿಯನ್ನು ವಾಪಸ್ ಪಡೆಯಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ 14,27,195 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ಸರ್ಕಾರಿ ಜಮೀನು ಒತ್ತುವರಿ ಮಾಡಿರುವವರನ್ನು ಯಾವುದೇ ಮುಲಾಜಿಗೊಳಗಾಗದೇ ತೆರವುಗೊಳಿಸಲಾಗುತ್ತದೆ ಎಂದು ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ. ಕ್ರಿಯಾಯೋಜನೆ ಸಿದ್ಧಪಡಿಸಿಕೊಂಡು ಒತ್ತುವರಿಯಾದ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.