ನವದೆಹಲಿ: ಕೋವಿಡ್ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಇತ್ತೀಚಿನ ಅಫಿಡವಿಟ್‌ನಲ್ಲಿ ಲಸಿಕೆಯಿಂದಾಗಿ ಸಾವು ಸಂಭವಿಸಿದರೆ, ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡುವ ಮೂಲಕ ಪರಿಹಾರವನ್ನು ಪಡೆಯುವುದು ಒಂದೇ ಮಾರ್ಗವಾಗಿದೆ ಎಂದು ಕೇಂದ್ರ ಹೇಳಿದೆ.
ಕಳೆದ ವರ್ಷ ಕೋವಿಡ್ ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ.
ಲಸಿಕೆಯಿಂದಾದ ಸಾವಿಗೆ ಸರ್ಕಾರ ಹೊಣೆಯಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಕೋವಿಡ್ ಲಸಿಕೆಯನ್ನು ಮೂರನೇ ವ್ಯಕ್ತಿ ಉತ್ಪಾದಿಸಿದ್ದಾರೆ. ಲಸಿಕೆಗೆ ಒಪ್ಪಿಗೆ ಸಿಕ್ಕ ನಂತರ ಬಳಕೆಗೆ ನೀಡಿದ್ದೇವೆ. ಸಾವು ಸಂಭವಿಸಿದರೆ ಕೋರ್ಟ್ ನಲ್ಲಿ ದಾವೆ ಹೂಡಿ ಪರಿಹಾರ ಪಡೆಯುವುದೊಂದೇ ಮಾರ್ಗವೆಂದು ಹೇಳಲಾಗಿದ್ದು, ಕೋವಿಡ್ ಸಾವಿಗೆ ಸರ್ಕಾರ ಹೊಣೆಯಲ್ಲ ಎಂದು ಕೇಂದ್ರ ಸರ್ಕಾರದಿಂದ ಅಫಿಡವಿಟ್ ಸಲ್ಲಿಸಲಾಗಿದೆ.