alex Certify ಭಾರತೀಯ ರೈಲ್ವೇ ಖಾಸಗೀಕರಣ ಬಗ್ಗೆ ಕೇಂದ್ರದಿಂದ ಮಾಹಿತಿ: ಯಾವುದೇ ಪ್ರಸ್ತಾಪ ಇಲ್ಲವೆಂದು ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ರೈಲ್ವೇ ಖಾಸಗೀಕರಣ ಬಗ್ಗೆ ಕೇಂದ್ರದಿಂದ ಮಾಹಿತಿ: ಯಾವುದೇ ಪ್ರಸ್ತಾಪ ಇಲ್ಲವೆಂದು ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟನೆ

ನವದೆಹಲಿ: ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇಂದು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯ ತಿಳಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ರೈಲ್ವೇ ನೇಮಕಾತಿ ಮಂಡಳಿಯ ಮೂಲಕ ನೇಮಕಾತಿ ಮಾಡಿಕೊಳ್ಳುವವರ ಸಂಖ್ಯೆ ಇಳಿಮುಖವಾಗಿದೆ. ಗುತ್ತಿಗೆ ನೌಕರರ ಸಂಖ್ಯೆ ಸ್ಥಿರವಾಗಿ ಹೆಚ್ಚುತ್ತಿದೆ ಎಂಬುದನ್ನು ಅವರು ನಿರಾಕರಿಸಿದ್ದಾರೆ.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಮಾನ್ಯ ಪ್ರಯಾಣಿಕರ ರೈಲುಗಳನ್ನು ಸಾರ್ವಜನಿಕ-ಖಾಸಗಿ ಮೋಡ್ ಮೂಲಕ ಓಡಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.

ಭಾರತ್ ಗೌರವ್ ರೈಲುಗಳ ಕುರಿತು ಮಾಹಿತಿ ನೀಡಿ, ಭಾರತ್ ಗೌರವ್ ರೈಲುಗಳ ಪೋರ್ಟಲ್‌ನಲ್ಲಿ 15 ಸೇವಾ ಪೂರೈಕೆದಾರರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 4 ಸೇವಾ ಪೂರೈಕೆದಾರರಿಗೆ ಭಾರತೀಯ ರೈಲ್ವೇ ಅವರ ಬೇಡಿಕೆಯಂತೆ ರೇಕ್‌ ಗಳನ್ನು ಮಂಜೂರು ಮಾಡಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...