13 ರಾಜ್ಯಗಳ ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ 300 ಮಿಲಿಯನ್ ಡಾಲರ್ ಸಾಲಕ್ಕೆ ಸಹಿ ಹಾಕಿದೆ ಎಂದು ತಿಳಿದುಬಂದಿದೆ. ಇದರಿಂದ 51 ಮಿಲಿಯನ್ ಸ್ಲಂ ವಾಸಿಗಳು ಸೇರಿದಂತೆ 256 ಮಿಲಿಯನ್ಗೂ ಅಧಿಕ ಜನರು ಪ್ರಯೋಜನ ಪಡೆಯಲಿದ್ದಾರೆ.
ಈ ವಿಚಾರವಾಗಿ ಕೇಂದ್ರ ಹಣಕಾಸು ಸಚಿವಾಲಯ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಹಾಗೂ ಸಾಂಕ್ರಾಮಿಕಗಳನ್ನು ತಡೆಗಟ್ಟುವ ಒಪ್ಪಂದಕ್ಕೆ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಜತ್ ಕುಮಾರ್ ಮಿಶ್ರಾ ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.
BIG NEWS: ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಚಿವ ಸಂಪುಟದಿಂದ ಅನುಮೋದನೆ
ಒಪ್ಪಂದದ ವಿಚಾರವಾಗಿ ಮಾತನಾಡಿದ ರಜತ್ ಕುಮಾರ್ ಮಿಶ್ರಾ, ಕೇಂದ್ರ ಸರ್ಕಾರವು ಆರೋಗ್ಯ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಿದೆ. ಆಯುಷ್ಮಾನ್ ಭಾರತ್ ಹಾಗೂ ಸ್ವಾಸ್ಥ್ಯ ಕೇಂದ್ರಗಳು, ಪ್ರಧಾನ ಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ ಯೋಜನೆ ಇವುಗಳನ್ನು ಪ್ರಧಾನ್ ಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಎಂದು ಮರುನಾಮಕರಣ ಮಾಡಲಾಗಿದೆ. ಈ ಮರುನಾಮಕರಣಗೊಂಡ ಯೋಜನೆ ಅಡಿಯಲ್ಲಿ ನಗರ ಪ್ರದೇಶಗಳಲ್ಲಿರುವ ದುರ್ಬಲರಿಗೆ ಗುಣಮಟ್ಟದ ಪ್ರಾಥಮಿಕ ಆರೋಗ್ಯ ಸೇವೆಗಳ ಲಭ್ಯತೆಯನ್ನು ನೋಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
2018ರಲ್ಲಿ ಪ್ರಧಾನಿ ಮೋದಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಆರಂಭಿಸಿದರು. ಭಾರತೀಯ ಜನತೆಯ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸುವುದು ಈ ಯೋಜನೆಯ ಗುರಿಯಾಗಿದೆ. ಕೋವಿಡ್ನಿಂದಾಗಿ ಆರೋಗ್ಯ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ.