alex Certify BIG NEWS: ಪ್ರಾಥಮಿಕ ಆರೋಗ್ಯ ಸೇವೆ ಸುಧಾರಣೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಾಥಮಿಕ ಆರೋಗ್ಯ ಸೇವೆ ಸುಧಾರಣೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

13 ರಾಜ್ಯಗಳ ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಏಷಿಯನ್​ ಡೆವಲಪ್​ಮೆಂಟ್​ ಬ್ಯಾಂಕ್​​ 300 ಮಿಲಿಯನ್​ ಡಾಲರ್​ ಸಾಲಕ್ಕೆ ಸಹಿ ಹಾಕಿದೆ ಎಂದು ತಿಳಿದುಬಂದಿದೆ. ಇದರಿಂದ 51 ಮಿಲಿಯನ್​ ಸ್ಲಂ ವಾಸಿಗಳು ಸೇರಿದಂತೆ 256 ಮಿಲಿಯನ್​ಗೂ ಅಧಿಕ ಜನರು ಪ್ರಯೋಜನ ಪಡೆಯಲಿದ್ದಾರೆ.

ಈ ವಿಚಾರವಾಗಿ ಕೇಂದ್ರ ಹಣಕಾಸು ಸಚಿವಾಲಯ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಹಾಗೂ ಸಾಂಕ್ರಾಮಿಕಗಳನ್ನು ತಡೆಗಟ್ಟುವ ಒಪ್ಪಂದಕ್ಕೆ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಜತ್​ ಕುಮಾರ್​ ಮಿಶ್ರಾ ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.

BIG NEWS: ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಚಿವ ಸಂಪುಟದಿಂದ ಅನುಮೋದನೆ

ಒಪ್ಪಂದದ ವಿಚಾರವಾಗಿ ಮಾತನಾಡಿದ ರಜತ್​​ ಕುಮಾರ್ ಮಿಶ್ರಾ, ಕೇಂದ್ರ ಸರ್ಕಾರವು ಆರೋಗ್ಯ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಿದೆ. ಆಯುಷ್ಮಾನ್​ ಭಾರತ್​​ ಹಾಗೂ ಸ್ವಾಸ್ಥ್ಯ ಕೇಂದ್ರಗಳು, ಪ್ರಧಾನ ಮಂತ್ರಿ ಆತ್ಮನಿರ್ಭರ್​​ ಸ್ವಸ್ಥ ಭಾರತ ಯೋಜನೆ ಇವುಗಳನ್ನು ಪ್ರಧಾನ್​ ಮಂತ್ರಿ ಆಯುಷ್ಮಾನ್​ ಭಾರತ ಆರೋಗ್ಯ ಮೂಲಸೌಕರ್ಯ ಎಂದು ಮರುನಾಮಕರಣ ಮಾಡಲಾಗಿದೆ. ಈ ಮರುನಾಮಕರಣಗೊಂಡ ಯೋಜನೆ ಅಡಿಯಲ್ಲಿ ನಗರ ಪ್ರದೇಶಗಳಲ್ಲಿರುವ ದುರ್ಬಲರಿಗೆ ಗುಣಮಟ್ಟದ ಪ್ರಾಥಮಿಕ ಆರೋಗ್ಯ ಸೇವೆಗಳ ಲಭ್ಯತೆಯನ್ನು ನೋಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

2018ರಲ್ಲಿ ಪ್ರಧಾನಿ ಮೋದಿ ಆಯುಷ್ಮಾನ್​ ಭಾರತ್​ ಯೋಜನೆಯನ್ನು ಆರಂಭಿಸಿದರು. ಭಾರತೀಯ ಜನತೆಯ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸುವುದು ಈ ಯೋಜನೆಯ ಗುರಿಯಾಗಿದೆ. ಕೋವಿಡ್​ನಿಂದಾಗಿ ಆರೋಗ್ಯ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...