ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು, ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿಗೆ ಸಂಬಂಧಿಸಿದಂತೆ ಸರ್ಕಾರ ಕ್ರಮಕೈಗೊಂಡಿದೆ.
ಸರ್ಕಾರಿ ಕಚೇರಿಗಳಲ್ಲಿ ಶೇಕಡ 50 ರಷ್ಟು ಸಿಬ್ಬಂದಿ ಹಾಜರಾತಿ ಮುಂದುವರೆಸಿ ಆದೇಶ ಹೊರಡಿಸಲಾಗಿದೆ. ಜೂನ್ 30 ರವರೆಗೆ ಶೇಕಡ 50 ರಷ್ಟು ಹಾಜರಾತಿ ಮುಂದುವರಿಕೆ ಮಾಡಲಾಗಿದೆ. ಕೊರೋನಾ ಕಾರಣದಿಂದಾಗಿ ಶೇಕಡ 50 ರಷ್ಟು ಸಿಬ್ಬಂದಿ ಹಾಜರಾತಿಯೊಂದಿಗೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದ್ದು, ಅದನ್ನು ಮುಂದುವರೆಸಲಾಗಿದೆ.