ಬೆಂಗಳೂರು: ಸರ್ಕಾರಿ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಆದೇಶ ಮಾಡುವಂತೆ ಆರೋಗ್ಯ ಸಚಿವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮನವಿ ಮಾಡಿದ್ದಾರೆ.
ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸರ್ಕಾರಿ ವೈದ್ಯರೆಲ್ಲ ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಆದೇಶಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೂಡಲೇ ಸರ್ಕಾರ ಆದೇಶ ಜಾರಿ ಮಾಡಬೇಕು ಎಂದು ಕೋರಿ ಆರೋಗ್ಯ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಾದ್ಯಂತ ಇರುವ ನೂರಾರು ಕನ್ನಡಪ್ರಿಯ ವೈದ್ಯರು ರೋಗಿಯ ಹೆಸರನ್ನು ಕನ್ನಡದಲ್ಲಿಯೇ ಬರೆಯುವುದಾಗಿ ತಿಳಿಸುತ್ತಿದ್ದಾರೆ. ಕೆಲವರು ಮದ್ದಿನ ಹೆಸರನ್ನೂ ಕನ್ನಡದಲ್ಲಿ ಬರೆಯುತ್ತಿದ್ದಾರೆ. ಕನ್ನಡ ಬೆಳೆಯುವ ಒಂದು ಹಾದಿ ಇದೀಗ ತೆರೆದುಕೊಂಡಿದೆ ಎಂದು ತಿಳಿಸಿದ್ದಾರೆ.