ಬೆಂಗಳೂರು: ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಖಾಸಗಿ ಪ್ರಯೋಗಾಲಯಗಳನ್ನು ಬಂದ್ ಮಾಡುವಂತೆ ಸರ್ಕಾರ ಆದೇಶಿಸಿದೆ.
200 ಮೀಟರ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳ ಪರಿಶೀಲನೆ ನಡೆಸಿ ಕಾಯ್ದೆ ಉಲ್ಲಂಘಿಸಿದ್ದಲ್ಲಿ ಅವುಗಳನ್ನು ಮುಚ್ಚಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ದೂರದೊಳಗೆ ಯಾವುದೇ ಹೊಸ ಖಾಸಗಿ ಚಿಕಿತ್ಸಾ ಪ್ರಯೋಗಾಲಯಕ್ಕೆ ಅನುಮತಿ ನೀಡುವಂತಿಲ್ಲ.
ಹೀಗಿದ್ದರೂ, ಕೆಲವು ಖಾಸಗಿ ಲ್ಯಾಬೋರೇಟರಿಗಳು ತಲೆಎತ್ತಿವೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಕೆಪಿಎಂಇ ಅಧಿನಿಯಮ ಪ್ರಕಾರ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು ಮುಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು, ಸೇರಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.