ಬೆಂಗಳೂರು: ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಗಳ ರದ್ಧತಿಯಿಂದ ಗ್ಯಾರಂಟಿಗೆ ಹಣ ಉಳಿಸುವ ಲೆಕ್ಕಾಚಾರದಲ್ಲಿ ಈಗಾಗಲೇ ಕಾರ್ಡುದಾರರಿಗೆ ಅಧಿಕಾರಿಗಳು ಕಿರುಕುಳ ನೀಡಲು ಆರಂಭಿಸಿದ್ದಾರೆ. ಇದಕ್ಕಾಗಿ ಖಾಸಗಿ ಏಜೆನ್ಸಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಜನರಿಗೆ ಗೊತ್ತಾಗದಂತೆ ತೆರಿಗೆ ವಿಧಿಸುವುದು ಹೇಗೆ ಎಂಬುದರ ಕುರಿತಾಗಿ ಸರ್ಕಾರ ಲೆಕ್ಕಾಚಾರ ನಡೆಸಿದ್ದು, ಇದಕ್ಕಾಗಿ ಒಂದು ಸಮಿತಿ ರಚಿಸಲಾಗಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಅಶೋಕ್ ತಿಳಿಸಿದ್ದಾರೆ.