ಬೆಂಗಳೂರು: ನ್ಯಾಯಬೆಲೆ ಅಂಗಡಿಗಳ ಮಾಲೀಕರು ರಾಜ್ಯದಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಪ್ರತಿ ಕ್ವಿಂಟಾಲ್ ಆಹಾರ ಧಾನ್ಯ ವಿತರಣೆಗೆ 250 ರೂ. ಕಮಿಷನ್ ಕೊಡಬೇಕು. ಇ- ಕೆವೈಸಿ ಮಾಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.
ಸರ್ಕಾರ ಬೇಡಿಕೆ ಈಡೇರಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.