ಮುಂಬೈ: ಯುಪಿಐ ಮೂಲಕ ತೆರಿಗೆ ಪಾವತಿಸುವವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಆರ್‌ಬಿಐ ತೆರಿಗೆ ಪಾವತಿ ಮಿತಿಯನ್ನು ಒಂದು ಲಕ್ಷ ರೂ.ನಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಆರ್.ಬಿ.ಐ.ನ ಹಣಕಾಸು ನೀತಿ ಪರಾಮರ್ಶೆ ಸಮಿತಿ ಸಭೆ ಗುರುವಾರ ಮುಕ್ತಾಯವಾಗಿದ್ದು, ಪ್ರಸಕ್ತ ಹಣಕಾಸು ವರ್ಷದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಯುಪಿಐ ಮೂಲಕ ಆದಾಯ ಮತ್ತು ಇತರ ತೆರಿಗೆಗಳನ್ನು ಪಾವತಿಸಲು ಅವಕಾಶವಿದ್ದು, ಆ ಮಿತಿಯನ್ನು ಒಂದು ಲಕ್ಷ ರೂ.ಗಳಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.