alex Certify ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...