alex Certify ನೀರಾವರಿ ಯೋಜನೆಗಳಿಗೆ ಅನುದಾನ/ ತೀರುವಳಿ ಪಡೆಯಲು ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧ – ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಾವರಿ ಯೋಜನೆಗಳಿಗೆ ಅನುದಾನ/ ತೀರುವಳಿ ಪಡೆಯಲು ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧ – ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರದ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಧಿವೇಶನದಲ್ಲಿ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ನೀರಾವರಿ ಕೃಷ್ಣಾ ಭಾಗ್ಯ ಜಲ ನಿಗಮ 3ನೇ ಹಂತದಲ್ಲಿ 130 ಟಿಎಂಸಿ ನೀರು ಬಳಸಬೇಕು ಎಂಬ ಆದೇಶವಿದ್ದರೂ, ಅಫಿಡವಿಟ್ ಹಾಕಿಲ್ಲ. 2ನೇ ಟ್ರಿಬ್ಯುನಲ್ ಬ್ರಿಜೇಶ್ ಕುಮಾರ್ ವರದಿ ಕೊಟ್ಟು 13 ವರ್ಷಗಳಾಯಿತು. 13 ವರ್ಷಗಳಿಂದ ಗೆಜೆಟ್ ಅಧಿಸೂಚನೆ ಆಗಿಲ್ಲ. ಇದು ಆಗದೇ ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್ ಗೆ ಏರಿಸಲಾಗುವುದಿಲ್ಲ. ಈ ಬಗ್ಗೆ ಒತ್ತಾಯಿಸಲು ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ. ಆದರೆ ಪ್ರಧಾನಿಗಳು ಭೇಟಿಗೆ ಅವಕಾಶವನ್ನೇ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಅರಣ್ಯ ಮತ್ತು ಪರಿಸರದ ತೀರುವಳಿಯಾಗಬೇಕು. ಅವರು ಕೊಟ್ಟ ತಕ್ಷಣ ನಾವು ಕೆಲಸ ಪ್ರಾರಂಭ ಮಾಡುತ್ತೇವೆ. ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೃಷ್ಣ ಮೇಲ್ದಂಡೆಗೆ 21 ಸಾವಿರ ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಪಟ್ಟಿ. 5,300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಣೆಯಾಗಿದೆ. ಇವತ್ತಿನವರೆಗೆ ಒಂದು ಪೈಸೆ ಬಿಡುಗಡೆಯಾಗಿಲ್ಲ. ಆದರೆ ಮತ್ತೊಂದೆಡೆ ಕೇಂದ್ರ ಹಣಕಾಸು ಮಂತ್ರಿಗಳು ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಇಲ್ಲ ಎನ್ನುತ್ತಾರೆ. ನಾವು ಅಧಿಸೂಚನೆ ಆಗುವವರೆಗೆ ಪುನರ್ವಸತಿ ಮತ್ತು ಪುನಶ್ಚೇತನ ಕಾರ್ಯವನ್ನು ಕೈಗೊಳ್ಳುತ್ತೇವೆ. ನಾವು ಅತಿ, ಅತ್ಯಂತ, ಹಿಂದುಳಿದ ತಾಲ್ಲೂಕುಗಳನ್ನು ಅಭಿವೃದ್ಧಿ ಮಾಡಲು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೇಕೆ ದಾಟು 2018ರಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರ ಸಾಮಾನ್ಯ ವರ್ಷಗಳಲ್ಲಿ 177. 25 ಟಿಎಂಸಿ ತಮಿಳುನಾಡಿಗೆ ಕೊಡಬೇಕು ಎಂದು ತೀರ್ಪು ನೀಡಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಎರಡೂ ರಾಜ್ಯಗಳೂ ನೀರು ಹಂಚಿಕೊಳ್ಳಬೇಕು ಎಂದು ತಿಳಿಸಿದೆ. ಮೇಕೆದಾಟು ಯೋಜನೆಯು ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಮಾಡುವ ಸಲುವಾಗಿ ರೂಪಿಸಿರುವ ಯೋಜನೆ. ಅಣೆಕಟ್ಟು, ಬ್ಯಾಲೆಲ್ಸಿಂಗ್ ರಿಸರ್ವಾಯರ್. ಕರ್ನಾಟಕದ ವ್ಯಾಪ್ತಿಯಲ್ಲಿಯೇ ನಿರ್ಮಿಸುವುದು. ಇದರಿಂದ ತಮಿಳುನಾಡಿಗೆ ಏನೂ ಹಾನಿಯಿಲ್ಲ. ಬದಲಿಗೆ ಅನುಕೂಲವಾಗುತ್ತದೆ. ತಮಿಳುನಾಡು, ಕೇರಳ, ಆಂಧ್ರದ ಜೊತೆ ಮಾತುಕತೆ ವಿಫಲವಾಗಿ ನ್ಯಾಯಮಂಡಳಿಯು 193 ಟಿಎಂಸಿ ನೀರು ಕೊಡಬೇಕು ಎಂದು ತೀರ್ಪು ನೀಡಿತ್ತು. ನಂತರ 177.25 ಟಿಎಂಸಿ ಯನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉತ್ತರ ಕರ್ನಾಟಕದ ಚರ್ಚೆಯಲ್ಲಿ 42 ಜನ ಭಾಗವಹಿಸಿದ್ದು 11. ಗಂಟೆ 4 ನಿಮಿಷಗಳ ಕಾಲ ಮಾತನಾಡಿದ್ದಾರೆ. ರಾಜಕೀಯ ಬೆರೆಸದೆ ರಾಜ್ಯದ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಬಗ್ಗೆ ಚರ್ಚೆಯಾಗಿದೆ. ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಚರ್ಚೆಯಾಗಿದೆ. ಕಾಂಗ್ರೆಸ್ ನ 24 ಜನ ಬಿಜೆಪಿಯ 15, ಜನತಾ ದಳದ 2, ಪಕ್ಷೇತರರು ಒಬ್ಬರು ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಸಲಹೆಗಳನ್ನು ಕೊಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರವಿದ್ದಾಗ ಹಾಗೂ ಬಿಜೆಪಿ ಮೂರು ವರ್ಷ ಆಡಳಿತ ನಡೆಸಿದಾಗ ಉತ್ತರ ಕರ್ನಾಟಕದ ಬಗ್ಗೆ ಒಮ್ಮೆ ಮಾತ್ರ ಚರ್ಚೆಯಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...