alex Certify ರಾಜ್ಯದಲ್ಲಿ 2.53 ಲಕ್ಷ ಸರ್ಕಾರಿ ಹುದ್ದೆ ಖಾಲಿ: 1 ಲಕ್ಷ ಹುದ್ದೆ ಶೀಘ್ರವೇ ಭರ್ತಿ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ 2.53 ಲಕ್ಷ ಸರ್ಕಾರಿ ಹುದ್ದೆ ಖಾಲಿ: 1 ಲಕ್ಷ ಹುದ್ದೆ ಶೀಘ್ರವೇ ಭರ್ತಿ ಸಿಎಂ

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.53 ಲಕ್ಷ ಹುದ್ದೆಗಳು ಖಾಲಿ ಉಳಿದಿದ್ದು, ಇವುಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಸಿ.ಎಸ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, 7.60 ಲಕ್ಷ ಹುದ್ದೆ ಮಂಜೂರಾಗಿದೆ. 5.11 ಲಕ್ಷ ಹುದ್ದೆಗಳು ಭರ್ತಿಯಾಗಿದ್ದು, ಖಾಲಿ ಇರುವ ಹುದ್ದೆಗಳಲ್ಲಿ ಸಿ ಮತ್ತು ಡಿ ವೃಂದದ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ವರ್ತಿ ಮಾಡಲಾಗಿದೆ. ಸುಮಾರು 82,700 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...