ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಟ್ಟು 2.73 ಲಕ್ಷ ಹುದ್ದೆಗಳು ಖಾಲಿ ಉಳಿದಿರುವುದಾಗಿ ಹೇಳಲಾಗಿದೆ. 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ.
ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಲಾಗಿದೆ.
ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 26,168, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು ಖಾಲಿ ಉಳಿದಿದೆ.
ರಾಜ್ಯದ ವಿವಿಧ ಇಲಾಖೆಗಳ ವಿವಿಧ ವೃಂದಗಳ ಒಟ್ಟಾರೆ 4673 ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರೊಬ್ಬರು ಕೇಳಿದ ಪ್ರಶ್ನೆಗೆ ಸದನಕ್ಕೆ ಮಾಹಿತಿ ನೀಡಿದ್ದಾರೆ.