ಬೆಂಗಳೂರು: ಸರ್ಕಾರಿ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಈ ಹಿಂದೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಅಂತೆಯೇ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಿರುವ ವಾರ್ಷಿಕ ವೇಳಾಪಟ್ಟಿ ನಿಗದಿಪಡಿಸಲಾಗಿದೆ.
ಮೇ ಅಂತ್ಯದೊಳಗೆ ಸಂಬಂಧಿಸಿದ ಇಲಾಖೆ ಖಾಲಿ ಹುದ್ದೆಗಳ ಮಾಹಿತಿ ನೀಡಬೇಕು. ಜೂನ್ ಅಂತ್ಯದೊಳಗೆ ಇಲಾಖೆಗಳು ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದುಕೊಳ್ಳಬೇಕು. ಜುಲೈ ಅಂತ್ಯದೊಳಗೆ ಆರ್ಥಿಕ ಇಲಾಖೆ ಅನುಮೋದಿಸುವ ಹುದ್ದೆ ನೇಮಕಾತಿಗೆ ಆಯ್ಕೆ ಪ್ರಾಧಿಕಾರಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು. ಆಗಸ್ಟ್ ಅಂತ್ಯದೊಳಗೆ ಕೆಪಿಎಸ್ಸಿ, ಕೆಇಎ ಮತ್ತಿತರ ಪ್ರಾಧಿಕಾರಗಳಿಂದ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಿ ನವೆಂಬರ್ ಅಂತ್ಯದೊಳಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಬೇಕು ಎಂದು ಹೇಳಲಾಗಿದೆ.