ನವದೆಹಲಿ: ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಡಿಸಲಾಗಿದೆ. 2019 ರಲ್ಲಿ ಕೇಂದ್ರ ಸರ್ಕಾರ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡ 10 ರಷ್ಟು ಮೀಸಲಾತಿ ಘೋಷಿಸಿದ್ದು, ಈ ನಿಯಮದಲ್ಲಿದ್ದ ಗೊಂದಲಗಳನ್ನು ನಿವಾರಿಸಲಾಗಿದೆ.
ಪರಿಶಿಷ್ಟ ಜಾತಿ, ಪಂಗಡದವರು ಹಾಗೂ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇರುವ ಜಾತಿಗಳನ್ನು ಹೊರತುಪಡಿಸಿ ಎಲ್ಲ ಜಾತಿಯ ಅರ್ಹ ಅಭ್ಯರ್ಥಿಗಳಿಗೆ ಆದಾಯ ಮತ್ತು ಸ್ವತ್ತು ಪ್ರಮಾಣ ಪತ್ರ ಒದಗಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.