ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಖಾತೆಗೆ ಹಾಕುತ್ತಿದ್ದ ಹಣ ಸ್ಥಗಿತವಾಗಲಿದೆ. ಹಣದ ಬದಲು ಹೆಚ್ಚುವರಿ ಐದು ಕೆಜಿ ಅಕ್ಕಿ ಪೂರೈಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
ಕೇಂದ್ರ ಸರ್ಕಾರದಿಂದ ಕೆಜಿಗೆ 28 ರೂ. ದರದಲ್ಲಿ ರಾಜ್ಯಕ್ಕೆ ಅಕ್ಕಿ ಪೂರೈಸಲಿದ್ದು, ಇದರಿಂದ ರಾಜ್ಯಕ್ಕೆ 144 ಕೋಟಿ ರೂ. ಉಳಿತಾಯವಾಗಲಿದೆ. ಅನ್ನಭಾಗ್ಯ ಯೋಜನೆಯಡಿ ಇನ್ನು ಮುಂದೆ ಪ್ರತಿ ಫಲಾನುಭವಿಗೆ 10 ಕೆಜಿ ಲಭ್ಯವಾಗಲಿದ್ದು, ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿರುವ 5 ಕೆಜಿ ಹೆಚ್ಚುವರಿ ಅಕ್ಕಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಅನ್ನಭಾಗ್ಯ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ವಿತರಿಸಲಾಗುವುದು. ಇದಕ್ಕಾಗಿ ಆಹಾರ ಇಲಾಖೆ ತಯಾರಿ ನಡೆಸಿದೆ ಎನ್ನಲಾಗಿದೆ.