ಬೆಂಗಳೂರು: ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬೀಳುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಜನತಾ ಕರ್ಪ್ಯೂ ನಿಯಮ ಸಡಿಲಿಕೆ ಮಾಡಿದೆ. ಮಧ್ಯಾಹ್ನ 12 ಗಂಟೆಯವರೆಗೆ ದಿನಸಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸಂಜೆ 6 ಗಂಟೆಯವರೆಗೆ ತರಕಾರಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಎಪಿಎಂಸಿಗಳಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಸಂತೆಗಳಿಗೆ ನಿರ್ಬಂಧ ಹೇರಲಾಗಿದ್ದು, ಪರಿಷ್ಕೃತ ನಿಯಮಗಳು ಇಂದಿನಿಂದಲೇ ಅನ್ವಯವಾಗಲಿದೆ. ತಳ್ಳುವ ಗಾಡಿ ಮತ್ತು ಎಲ್ಲಾ ಹಾಪ್ ಕಾಮ್ಸ್ ಗಳಲ್ಲಿ ಹಣ್ಣು ತರಕಾರಿ ವ್ಯಾಪಾರಕ್ಕೆ ಸಂಜೆ 6 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿದೆ.
ಈ ಮೊದಲು ಬೆಳಗ್ಗೆ 6 ರಿಂದ 12 ಗಂಟೆಯವರೆಗೆ ಮಾತ್ರ ಅವಕಾಶ ವಿಸ್ತರಿಸಲಾಗಿತ್ತು. ಈಗ 12 ಗಂಟೆವರೆಗೆ ದಿನಸಿ ಸಂಜೆ 6 ಗಂಟೆಯವರೆಗೆ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.